ಜು.18ರವರೆಗೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ

Webdunia
ಬುಧವಾರ, 14 ಜುಲೈ 2021 (16:31 IST)
ಬೆಂಗಳೂರು: ಪೂರ್ವ ಅರಬ್ಬೀಸಮುದ್ರದ ಕರ್ನಾಕದ ಕರಾವಳಿಯಲ್ಲಿ ಕಡಿಮೆ ಒತ್ತಡವಿತರುವ ವಿಸ್ತರಿಸಿದ ಪ್ರದೇಶ ಇದೆ. ಕಚ್ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಪ್ರಭಾವದಿಂದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ14ರಿಂದ 18ರವರೆಗೆ ಭಾರೀ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ. 
 
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಭಾರೀ ಹಾಗೂ ಅತೀ ಭಾರೀ, ಕೆಲವೊಮ್ಮೆ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜುಲೈ 14, 15 ಹಾಗೂ 17ರಂದು ಆರೆಂಜ್ ಅಲರ್ಟ್ ಮತ್ತು ಜುಲೈ 16ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಪ್ರಾಾದೇಶಿಕ ನಿರ್ದೆಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾಾರೆ.
 
ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರ್ಗಿ ಜಿಲ್ಲೆಗಳ ಕೆಲವೆಡೆ ಭಾರೀ ಹಾಗೂತಿ ಭಾರೀ ಮಳೆ  ನಿರೀಕ್ಷಿಸಲಾಗಿದೆ. ಜುಲೈ 18ರಂದು ಯೆಲ್ಲೋ ಅಲರ್ಟ್, ಜುಲೈ 15, 16 ಹಾಗೂ 17ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಮಾಹಿತಿ ನೀಡಿದ್ದಾರೆ.
 
ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ:
ನೈರುತ್ಯ ಮುಂಗಾರು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಬುಧವಾರ ಸಾಮಾನ್ಯವಗಿತ್ತು. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಾಪಕ ಮಳೆಯಾಗಿದೆ. ಮುಖ್ಯವಾಗಿ, ಉತ್ತರ ಕನ್ನಡ ಜಿಲ್ಲೆಯ ಕದ್ರಾದಲ್ಲಿ 13 ಸೆಂ.ಮೀ, ಸುಬ್ರಮಣ್ಯದಲ್ಲಿ 10 ಸೆಂ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಉಪ್ಪಿನಂಗಡಿಯಲ್ಲಿ ತಲಾ 9 ಸೆಂ.ಮೀ. ಮಳೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮೀನಿನಲ್ಲಿ ಸಿಕ್ಕ ನಿಧಿ ಸರ್ಕಾರಕ್ಕೆ ನೀಡಿ ಪ್ರಾಮಾಣಿಕತೆ ಮೆರೆದು ಬೀದಿಗೆ ಬಿದ್ದ ಕುಟುಂಬ: ಯಾಕೆ ಹೀಗಾಯ್ತು

ಮುಟ್ಟಿನ ಕಾಲದ ನೋವು ತಾಳಲಾರದೆ ನೇಣಿಗೆ ಶರಣಾದ ಯುವತಿ

ಕರ್ನಾಟಕ ಸಿಎಂ ಬದಲಾವಣೆ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

ಕೇರಳದಲ್ಲಿ ಭಕ್ತರ ನಂಬಿಕೆಯನ್ನು ಬಿಜೆಪಿ ಮಾತ್ರ ಕಾಪಾಡಿಬಲ್ಲದು: ಅಮಿತ್ ಶಾ

ಎಲ್ಲವೂ ಅಂದುಕೊಂಡಂತೆ ನಡೆದರೆ ಈ ದಿನವೇ ಸಿದ್ದರಾಮಯ್ಯರಿಂದ ರಾಜ್ಯ ಬಜೆಟ್

ಮುಂದಿನ ಸುದ್ದಿ
Show comments