ರಾಜ್ಯಾದ್ಯಂತ ಮಳೆ ಮುಂದುವರಿಕೆ

Webdunia
ಸೋಮವಾರ, 11 ಜುಲೈ 2022 (21:11 IST)
ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಇಂದು ರಾಜ್ಯದ ವಿವಿಧ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಕಲಬುರ್ಗಿ, ದಕ್ಷಿಣ ಕನ್ನಡ, ಉಡುಪಿ,ಬೀದರ್, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ  ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಮಾಹಿತಿ ಬಿಡುಗಡೆ ಮಾಡಿರುವ ಭಾರತೀಯ ಹವಾಮಾನ ಇಲಾಖೆಯು ಇಂದು ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ದಾವಣಗೆರೆ ಮತ್ತು ಮೈಸೂರು ಜಿಲ್ಲೆಗಳಲ್ಲಿ 64.5ಮಿ.ಮಿ ನಿಂದ 115.5ರಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ನಾಳೆ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮಿ. ನಷ್ಟು ಭಾರೀ ಮಳೆಯಾಗಲಿದೆ ಎಂಬುದಾಗಿ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆರಳಿನ ಗುರುತಿಗೆ ಚುನಾವಣಾ ಆಯೋಗ ಮಾರ್ಕರ್ ಪೆನ್ ಬಳಕೆ ಶುರು ಮಾಡಿದ್ದು ಯಾವಾಗ: ಇಲ್ಲಿದೆ ಸಂಪೂರ್ಣ ವಿವರ

ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ

ಡಿಕೆ ಶಿವಕುಮಾರ್ ಕೈಗೆ ಸಿಗದ ರಾಹುಲ್ ಗಾಂಧಿ ಬೇರೆ ನಾಯಕರನ್ನು ಭೇಟಿ ಮಾಡ್ತಿರೋದು ಯಾಕೆ

Karnataka Weather: ವಾರಂತ್ಯಕ್ಕೆ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಪಿತೃವಿಯೋಗ: ಬೀದರ್‌ನ ಧೀಮಂತ ರಾಜಕಾರಣಿ ಭೀಮಣ್ಣ ಖಂಡ್ರೆ ಇನ್ನಿಲ್ಲ

ಮುಂದಿನ ಸುದ್ದಿ
Show comments