Publish Date: Mon, 11 Jul 2022 (17:05 IST)
Updated Date: Mon, 11 Jul 2022 (17:23 IST)
ರಾಜ್ಯದಲ್ಲಿ ಮಳೆ ಅಬ್ಬರದಿಂದ ಹಾನಿಯಾದ ಮನೆಗಳಿಗೆ ಕೇವಲ ₹ 10,000 ಪರಿಹಾರ ನೀಡಿದರೆ ಸಾಕೇ? ಎಂದು ಸರ್ಕಾರವನ್ನು ಕಾಂಗ್ರೆಸ್ ಪ್ರಶ್ನಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಳೆ ಮತ್ತು ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಎಸ್ಪಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜತೆ ಕಳೆದ ವಾರ ವಿಡಿಯೊ ಸಂವಾದ ನಡೆಸಿದ್ದರು.
ಮಳೆ ಮತ್ತು ಪ್ರವಾಹದಿಂದ ಜೀವಹಾನಿಯಾದ ಕುಟುಂಬಗಳಿಗೆ ಹಾಗೂ ಮನೆಗಳ ಹಾನಿಗೆ ತಕ್ಷಣವೇ ಪರಿಹಾರ ನೀಡಬೇಕು. ರಕ್ಷಣಾ ಕಾರ್ಯಕ್ಕೆ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಬೇಕು. ಮನೆ ಹಾನಿ ಆದವರಿಗೆ ತಕ್ಷಣವೇ ತಲಾ ₹10 ಸಾವಿರ ತುರ್ತು ಪರಿಹಾರ ನೀಡಬೇಕು ಎಂದು ಸೂಚಿಸಿದ್ದರು.