Publish Date: Sat, 17 Mar 2018 (10:03 IST)
Updated Date: Sat, 17 Mar 2018 (10:04 IST)
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ.
ಮೊನ್ನೆಯಿಂದ ಕೇರಳ ಮತ್ತು ಗಡಿನಾಡ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ನಿನ್ನೆ ರಾಜಧಾನಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಿದೆ. ಇಂದೂ ಕೂಡಾ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.
ಇಂದೂ ಕೂಡಾ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ. ನಿನ್ನೆ ಸುರಿದ ಭಾರೀ ಮಳೆಗೆ ಅಲ್ಲಲ್ಲಿ ವಿದ್ಯುತ್ ವ್ಯತ್ಯಯವಾಗಿದ್ದು, ಸಂಚಾರ ವ್ಯವಸ್ಥೆ ಅಸ್ತವ್ಯಸ್ಥವಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ