Publish Date: Tue, 17 Apr 2018 (07:26 IST)
Updated Date: Tue, 17 Apr 2018 (07:28 IST)
ಬೆಂಗಳೂರು: ರಾಜಧಾನಿ ಬೆಂಗಳೂರು ಮತ್ತು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ ರಾತ್ರಿ ಭಾರೀ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಿದ್ದು, ಹಲವೆಡೆ ವಿದ್ಯುತ್ ಸಂಪರ್ಕ ಕಡಿದು ಹೋಗಿದೆ. ಇದರಿಂದಾಗಿ ಟ್ರಾಫಿಕ್ ಸಮಸ್ಯೆಯೂ ಉಂಟಾಗಿತ್ತು.
ಮೈಸೂರಿನಲ್ಲಿ ಭಾರೀ ಗಾಳಿ ಸಹಿತ ಮಳೆಯಾಗಿದ್ದು, ಬನ್ನಿ ಮಂಟಪ ಮುಂತಾದೆಡೆ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಯಿತು. ಭಾರೀ ಮಳೆಯ ಹಿನ್ನಲೆಯಲ್ಲಿ ಇಲ್ಲೂ ಹಲವೆಡೆ ವಿದ್ಯುತ್ ಸಂಪರ್ಕ ಕಡಿದಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.