Publish Date: Tue, 24 Oct 2023 (14:22 IST)
Updated Date: Tue, 24 Oct 2023 (13:15 IST)
ಇಂದು ನಾಳೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉ.ಕನ್ನಡ ಜಿಲ್ಲೆಯ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಭಾಗಲಕೋಟೆ, ಧಾರವಾಡ, ಗದಗ, ವಿಜಯಪುರ, ಕಲಬುರಗಿ, ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ಸಾಧ್ಯತೆಯಿದೆ ಎಂದು ತಿಳಿಸಿದೆ.