Publish Date: Wed, 22 Nov 2023 (15:46 IST)
Updated Date: Wed, 22 Nov 2023 (16:07 IST)
ನಗರದಲ್ಲಿ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಮಳೆ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 24ರಂದು ಅತಿ ಹೆಚ್ಚು ಮಳೆಯಾಗಲಿದೆ,ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.