Publish Date: Sat, 25 Nov 2023 (16:00 IST)
Updated Date: Sat, 25 Nov 2023 (17:08 IST)
ನವೆಂಬರ್ 28 ರವರೆಗೆ ರಾಜ್ಯದಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶನಿವಾರ ಸಾಧಾರಣ ಮಳೆಯಾಗಲಿದೆ ಅಂತಾ ಇಲಾಖೆ ಹೇಳಿದೆ.