Select Your Language

Notifications

webdunia
webdunia
webdunia
webdunia

ನಾಳೆಯಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

Rain is likely across the state from tomorrow
bangalore , ಮಂಗಳವಾರ, 1 ನವೆಂಬರ್ 2022 (16:15 IST)
ಕಳೆದ ತಿಂಗಳು ಬೆಂಗಳೂರಿನಲ್ಲಿ ಮಳೆಯ ಅಬ್ಬರ ಜೋರಾಗಿತ್ತು. ಆದರೆ, ಕಳೆದ 10 ದಿನಗಳಿಂದ ಕರ್ನಾಟಕದ ಎಲ್ಲೆಡೆ ವರುಣನ ಆರ್ಭಟ ಕಡಿಮೆಯಾಗಿತ್ತು. ಇದೀಗ ನಾಳೆಯಿಂದ ಮಳೆಯ ಅಬ್ಬರ ಮತ್ತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ ನವೆಂಬರ್ ತಿಂಗಳಲ್ಲಿ ಮತ್ತೆ ಮಳೆ ಸುರಿಯುವ ಸಾಧ್ಯತೆ ಇದೆ. ಈಶಾನ್ಯ ಮಾನ್ಸೂನ್ ಪ್ರಾರಂಭವಾದ ನಂತರ ಮಳೆ ಹೆಚ್ಚಾಗಲಿದ್ದು, ನವೆಂಬರ್ 2ರಿಂದ ನವೆಂಬರ್ 4ರವರೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಭುವನೇಶ್ವರಿಗೆ ಸಿಎಂ ಪುಷ್ಪ ನಮನ