ನೈಋತ್ಯ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಮತ್ತು ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಮೋಡ ಕವಿದ ವಾತಾವರಣವಿರಲಿದ್ದು, ಇನ್ನು ಉಳಿದ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಕುರಿತು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಳೆ ಕೊಂಚ ಅಧಿಕವಾಗಿ ಸುರಿದರೂ ಬೆಂಗಳೂರಿನ ರಸ್ತೆಗಳು ನದಿಯಂತಾಗುತ್ತದೆ. ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗುತ್ತೆ. ಆದ್ರಿಂದ ಜನರು ಕೊಂಚ ಅಲರ್ಟ್ ಆಗಿರುವುದು ಸೂಕ್ತ