Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ 3 ದಿನ ಮಳೆ ಸಾಧ್ಯತೆ

ರಾಜ್ಯದಲ್ಲಿ 3 ದಿನ ಮಳೆ ಸಾಧ್ಯತೆ
bangalore , ಶನಿವಾರ, 22 ಅಕ್ಟೋಬರ್ 2022 (16:17 IST)
ಕರ್ನಾಟಕದಲ್ಲಿ ಕೆಲ ಕಡೆ ಮಳೆ ಮಳೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಮಳೆ ಮುಂದುವರೆಯುವ ನಿರೀಕ್ಷೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಬೆಂಗಳೂರು, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಇನ್ನೂ 3 ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲೂ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವುದರಿಂದ ಮಳೆಯ ಅಬ್ಬರವೂ ಹೆಚ್ಚಾಗಿದೆ. ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದಿನಿಂದ ಅಕ್ಟೋಬರ್​​ 24ರವರೆಗೆ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕಳೆದ 1 ವಾರದಿಂದ ಭಾರೀ ಮಳೆಯಾಗುತ್ತಿರುವುದರಿಂದ ರಾಜಕಾಲುವೆ, ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ರೋಜ್​ಗಾರ್ ಮೇಳಕ್ಕೆ ಮೋದಿ ಚಾಲನೆ