Publish Date: Sat, 18 Nov 2023 (17:25 IST)
Updated Date: Sat, 18 Nov 2023 (17:27 IST)
ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಚಾಮರಾಜ ನಗರ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.
ದಕ್ಷಿಣ ಒಳನಾಡು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಕೂಡ ಒಣಹವೆ ಬೀಸಲಿದೆ.