Select Your Language

Notifications

webdunia
webdunia
webdunia
webdunia

ಮಳೆಗೆ ನಲುಗಿದ ಹಿಮಾಚಲ ಪ್ರದೇಶ

ಮಳೆಗೆ ನಲುಗಿದ ಹಿಮಾಚಲ ಪ್ರದೇಶ
ಹಿಮಾಚಲ ಪ್ರದೇಶ , ಬುಧವಾರ, 16 ಆಗಸ್ಟ್ 2023 (16:02 IST)
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಅನಾಹುತಗಳು ಸಂಭವಿಸುತ್ತಲೇ ಇವೆ. ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಅವಾಂತರಗಳಿಂದ ಈವರೆಗೆ 55 ಮಂದಿ ಸಾವನ್ನಪ್ಪಿದ್ದರೆ, ಉತ್ತರಾಖಂಡದಲ್ಲಿ ಮೂವರು ಮೃತಪಟ್ಟಿದ್ದಾರೆ. ಭಾರತೀಯ ಹವಾಮಾನ ಇಲಾಖೆಯು ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಡೆಹ್ರಾಡೂನ್, ಪುರಿ, ತೆಹ್, ನೈನಿತಾಲ್, ಚಂಪಾವತಿ ಮತ್ತು ಉಧಮ್ ಸಿಂಗ್‌ ನಗರಗಳು ಸೇರಿದಂತೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಹಲವು ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮಳೆಯಿಂದ ಈಗಾಗಲೇ 55 ಮಂದಿ ಪ್ರಾಣ ಕಳೆದುಕೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಮಂಡಿ ಪ್ರದೇಶದಲ್ಲಿ ಅತಿ ಹೆಚ್ಚು ಜನರು ಮೃತಪಟ್ಟಿದ್ದಾರೆ. ಭೂಕುಸಿತದಿಂದ ಹೆದ್ದಾರಿಗಳಲ್ಲಿ ಸಿಲುಕಿರುವ ಪ್ರಯಾಣಿಕರನ್ನು ರಕ್ಷಿಸುವ ಕಾರ್ಯದಲ್ಲಿ ವಿಪತ್ತು ನಿರ್ವಹಣಾ ತಂಡ ತೊಡಗಿದೆ. ಚಂಡೀಗಢ - ಶಿಮ್ಲಾ ನಡುವಿನ ರಾಷ್ಟ್ರೀಯ ಹೆದ್ದಾರಿಗಳು ಸಂಚಾರಕ್ಕೆ ಮುಕ್ತವಾಗಿದ್ದು, ರಾಜ್ಯ ಹೆದ್ದಾರಿಗಳ ತೆರವಿಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭೀಕರ ಅಪಘಾತ : ಸ್ಥಳದಲ್ಲೇ ಐವರ ಸಾವು!