Publish Date: Sat, 14 Oct 2017 (10:17 IST)
Updated Date: Sat, 14 Oct 2017 (10:19 IST)
ಬೆಂಗಳೂರು: ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ತತ್ತರಿಸಿ ಹೋಗಿರುವ ಬೆಂಗಳೂರು ಸೇರಿದಂತೆ ರಾಜ್ಯದ ಜನತೆಗೆ ಇನ್ನೂ ಎರಡು ದಿನ ಮಳೆ ಕಾಟ ತಪ್ಪಿದ್ದಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ.
ಹಲವೆಡೆ ರಸ್ತೆಗಳಿಗೆ ನೀರು ನುಗ್ಗಿದ್ದು ವಾಹನ ಸಂಚಾರ ಕಷ್ಟವಾಗಿದೆ. ನಿನ್ನೆ ರಾತ್ರಿ ಮಳೆ ನೀರಿಗೆ ಕೊಚ್ಚಿ ಹೋಗಿದ್ದ ಅರ್ಚಕ ವಾಸುದೇವ್ ಮೃತದೇಹ ಪತ್ತೆ ಕಾರ್ಯ ಇನ್ನೂ ಮುಂದುವರಿದಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಒಳಸುಳಿಗಾಳಿ ಎದ್ದಿರುವ ಹಿನ್ನಲೆಯಲ್ಲಿ ರಾಜ್ಯದಾದ್ಯಂತ ಇನ್ನೂ ಎರಡು ದಿನ ಮಳೆ ಸುರಿಯಲಿದೆ ಎಂದು ಹವಾಮಾನ ವರದಿ ಹೇಳಿದೆ. ಈ ಹಿನ್ನಲೆಯಲ್ಲಿ ಇನ್ನೂ ಎರಡು ದಿನಗಳ ಕಾಲ ಜನತೆ ಎಚ್ಚರವಾಗಿರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ