Daily Horoscope

Karnataka Rain: ಈ ದಿನಾಂಕದವರೆಗೂ ಕರ್ನಾಟಕದಲ್ಲಿ ಮಳೆ ಗ್ಯಾರಂಟಿ

Krishnaveni K
ಸೋಮವಾರ, 7 ಅಕ್ಟೋಬರ್ 2024 (10:46 IST)
ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇನ್ನೂ ಎಷ್ಟು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಲೇಟೆಸ್ಟ್ ವರದಿ ನೀಡಿದೆ.

ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ರಾತ್ರಿ ಮಳೆಯಾಗುತ್ತಿದೆ. ಇದರಿಂದಾಗಿ ರಸ್ತೆ, ಮನೆಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಇಂದೂ ಕೂಡಾ ಮೋಡ ಕವಿದ ವಾತಾವರಣ ಮುಂದುವರಿದಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಮತ್ತು ಕನಿಷ್ಠ ಉಷ್ಣಾಂಶ 19.2 ಡಿಗ್ರಿ ಸೆಲ್ಸಿಯಸ್ ನಷ್ಟಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕ 15 ಜಿಲ್ಲೆಗಳಲ್ಲಿ ಅಕ್ಟೋಬರ್ 10 ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಈ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದ್ದು ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ. ಮಳೆಯ ಜೊತೆಗೆ ಬಿರುಗಾಳಿ, ಗುಡುಗು ಕಂಡುಬರುತ್ತಿದೆ. ಹೀಗಾಗಿ ನಾಗರಿಕರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ಕಡಲ ತೀರಗಳಿಗೆ ಹೋಗಲು ಇದು ಸಕಾಲವಲ್ಲ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments