Publish Date: Sun, 10 Jul 2022 (18:52 IST)
Updated Date: Sun, 10 Jul 2022 (18:56 IST)
ರಾಜ್ಯಾದ್ಯಂತ ಮುಂದಿನ 3 ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮಳೆ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇನ್ನೂಳಿದಂತೆ ಬೆಂಗಳೂರಿನಲ್ಲಿ ಗಾಳಿ ಹಾಗೂ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ