Publish Date: Mon, 28 Aug 2017 (08:28 IST)
Updated Date: Mon, 28 Aug 2017 (08:30 IST)
ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯ ರಾಜಧಾನಿಯಲ್ಲಿ ವರುಣ ದೇವನ ಕೃಪಾಕಟಾಕ್ಷ ಜೋರಾಗಿದೆ. ಈ ವರ್ಷಧಾರೆ ಇನ್ನೂ ಎರಡು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರ್ನಾಟಕ, ಒಡಿಶಾ ಸೇರಿದಂತೆ ದೇಶದ ಹಲೆವೆಡೆ ಇನ್ನೂ ಎರಡು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಹವಾಮಾನದಲ್ಲಿ ವೈಪರೀತ್ಯವಾಗಲಿದೆ ಎಂದು ಹೇಳಲಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಹಲವೆಡೆ ಮಳೆಯಿಂದಾಗಿ ಜನರು ತೊಂದರೆ ಅನುಭವಿಸುತ್ತಿದ್ದು, ಇನ್ನೂ ಎರಡು ದಿನ ಈ ಸಮಸ್ಯೆ ತಪ್ಪಿದ್ದಲ್ಲ ಎಂಬುದು ಖಾತ್ರಿಯಾಗಿದೆ.