ಆ.9ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

Webdunia
ಗುರುವಾರ, 5 ಆಗಸ್ಟ್ 2021 (20:27 IST)
ಬೆಂಗಳೂರು: ಕರಾವಳಿ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಆ.6ರಿಂದ 9ರವರೆಗೆ ಗುಡುಗು ಸಹಿತ ವ್ಯಾಪಕ ಮಳೆ ಮುಂದುವರಿಯಲ್ಲಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಹಲವು ಭಾಗಗಳಲ್ಲಿ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ.
 
ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಆ.7 ಮತ್ತು 8ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ.
 
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಮುಂದಿನ ಎರಡು ದಿನ ಮಳೆಯಾಗುವ ಹೆಚ್ಚಿನ ನಿರೀಕ್ಷೆಯಿದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
 
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುರುವಾರ ನೈರುತ್ಯ ಮುಂಗಾರು ಸಾಮಾನ್ಯವಾಗಿದ್ದು, ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಜಿಲ್ಲೆಗಳ ಬಹುತೇಕ ಎಲ್ಲ ಸ್ಥಳಗಳಲ್ಲಿ ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗಿದೆ.
 
ಹಲವೆಡೆ ಭಾರಿ ಮಳೆ:
 
ಶಿವಮೊಗ್ಗದ ಆಗುಂಬೆಯಲ್ಲಿ 11 ಸೆಂ.ಮೀ., ಉಡುಪಿಯ ಕೊಲ್ಲೂರು, ಕೊಡಗಿನ ಸಂತಹಳ್ಳಿಯಲ್ಲಿ ತಲಾ 6ಸೆಂ.ಮೀ., ಉತ್ತರ ಕನ್ನಡದ ಸಿದ್ದಾಪುರ, ಸುಬ್ರಹ್ಮಣ್ಯದಲ್ಲಿ ತಲಾ 5 ಸೆಂ.ಮೀ., ಕದ್ರಾ, ಉಡುಪಿಯ ಸಿದ್ದಾಪುರ, ಮೂಡಬಿದ್ರೆ, ಶಿವಮೊಗ್ಗದ ಅಗ್ರಹಾರ ಕೊಣನಂದೂರು, ತಾಳಗುಪ್ಪದಲ್ಲಿ ತಲಾ 4 ಸೆಂ.ಮೀ., ಉತ್ತರ ಕನ್ನಡದ ಜನ್ಮನೆ, ಮಂಚಿಕೆರೆ, ಯಲ್ಲಾಪುರ, ಕೋಟ, ಧರ್ಮಸ್ಥಳ, ಮಂಗಳೂರು, ಶಿವಮೊಗ್ಗದ ತೀರ್ಥಹಳ್ಳಿ ಮತ್ತು ಮಂಡಗದ್ದೆ, ಮಡಿಕೇರಿ, ಭಾಗಮಂಡಲ, ಶೃಂಗೇರಿಯಲ್ಲಿ ತಲಾ 3 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಏರ್ ಪೋರ್ಟ್ ನಲ್ಲಿ ಮಂಡಿಯೂರಿದ್ರೂ ವಿಫಲವಾಯ್ತು ಎಂದು ಡಿಕೆಶಿಯೇ ಒಪ್ಪಿಕೊಂಡ್ರು: ಬಿಜೆಪಿ ವ್ಯಂಗ್ಯ

ನಡು ರಸ್ತೆಯಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಗಂಡನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತ್ನಿ Video

ಮುಂದಿನ ಸುದ್ದಿ
Show comments