Select Your Language

Notifications

webdunia
webdunia
webdunia
webdunia

ಡಿಸೆಂಬರ್ 16 ರವರೆಗೆ ಮುಂದುವರೆಯಲಿರುವ ಮಳೆ

Rain will continue till December 16
bangalore , ಸೋಮವಾರ, 12 ಡಿಸೆಂಬರ್ 2022 (20:20 IST)
ಮ್ಯಾಂಡಸ್‌ ಚಂಡಮಾರುತ ಪ್ರಭಾವದಿಂದ ರಾಜ್ಯದಲ್ಲಿ ಡಿ.16 ರ ವರೆಗೆ ಮಳೆ ಮುಂದುವರಿಯಲಿದ್ದು, ರಾಜ್ಯದ ಮೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.
 
ಡಿಸೆಂಬರ್ 16 ರವರೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಮತ್ತು ಚಾಮರಾಜನಗರ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಿದೆ.
 
ದಕ್ಷಿಣ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ಮಳೆಯಿಂದ ಹಾನಿಯಾಗುವ ಸಾಧ್ಯತೆ ಇದೆ. ಕೇಂದ್ರ ಜಿಲ್ಲೆಗಳಾದ ಚಿತ್ರದುರ್ಗ ಮತ್ತು ದಾವಣಗೆರೆಯಲ್ಲೂ ಮಳೆಯಾಗಲಿದೆ. ಸತತ ಮಳೆಯಿಂದಾಗಿ ಬೆಳೆ ನಷ್ಟವಾಗುವ ಆತಂಕ ರೈತರನ್ನು ಕಾಡುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನೈತಿಕ ಪೊಲೀಸ್ ಗಿರಿ ಖಂಡಿಸಿ ನಾಲ್ವರ ಬಂಧನ