ಆಗಸ್ಟ್ 26ರವರೆಗೆ ರಾಜ್ಯಾದ್ಯಂತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Webdunia
ಭಾನುವಾರ, 22 ಆಗಸ್ಟ್ 2021 (16:36 IST)
ನೈರುತ್ಯ ಬಂಗಾಳ ಉಪಸಾಗರದ ಶ್ರೀಲಂಕಾದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮದಿಂದ ಆಗಸ್ಟ್‌ 26ರವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ವ್ಯಾಾಪಕ ಮಳೆಯಾಗುವ
ಹೆಚ್ಚಿನ ಸಾಧ್ಯತೆಯಿದೆ.
ಆಗಸ್ಟ್‌ 23ರಿಂದ 26ರವರೆಗೆ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮುಂದಿನ ಎರಡು ದಿನಗಳ ವರೆಗೆ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 29 ಹಾಗೂ ಕನಿಷ್ಠ ಉಷ್ಣಾಂಶ 20 ಡಿ.ಸೆ. ಇರಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ರಾಜ್ಯಾದ್ಯಂತ ಭಾನುವಾರ ನೈರುತ್ಯ ಮುಂಗಾರು ಚುರುಕಾಗಿತ್ತು. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಿದೆ. ಮುಖ್ಯವಾಗಿ ಕಲಬುರ್ಗಿಯಲ್ಲಿ 10 ಸೆಂ.ಮೀ., ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ 9 ಸೆಂ.ಮೀ., ಕಲಬುರ್ಗಿ ಜಿಲ್ಲೆಯ ಚಿಂಚೋಳಿಯಲ್ಲಿ 5 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಜಾತಿ ಸಮೀಕ್ಷೆ ವಿರೋಧಿಸುತ್ತಿರುವ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ಬೆಂಗಳೂರಿನಲ್ಲಿ ಯಾವಾಗ ಜಾತಿಗಣತಿ ಆರಂಭ: ಇಲ್ಲಿದೆ ಉತ್ತರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Karnataka Weather: ದಸರಾ ಸಂದರ್ಭದಲ್ಲಿ ರಾಜ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

OM ಸಿಸ್ಟಮ್, ಒಲಿಂಪಸ್ ನಿಂದ ಎರಡು ಹೊಸ ಇಮೇಜಿಂಗ್ ಉತ್ಪನ್ನಗಳ ಬಿಡುಗಡೆ

ಮುಂದಿನ ಸುದ್ದಿ
Show comments