Publish Date: Sun, 30 Apr 2023 (15:15 IST)
Updated Date: Sun, 30 Apr 2023 (15:17 IST)
ರಾಜ್ಯದಲ್ಲಿ ಇಂದಿನಿಂದ 3 ದಿನ ಮಳೆಯ ಮುನ್ಸೂಚನೆಯ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.ಇಂದು ಮತ್ತು ನಾಳೆ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.ಇಂದು ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ ಇದ್ದು,ಜೊತೆಗೆ ಮುಂದಿನ ಎರಡು ದಿನ ದಕ್ಷಿಣ ಒಳನಾಡು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ರಾಮನಗರ, ಶಿವಮೊಗ್ಗ , ತುಮಕೂರಿನ ಒಂದೆರಡು ಕಡೆ ಭಾರೀ ಮಳೆ ಸಾಧ್ಯತೆ ಇದೆ.ಇಂದಿನಿಂದ ಬೆಂಗಳೂರು ಹಾಗೂ ಬೆಂಗಳೂರು ಸುತ್ತಮುತ್ತ ಮೋಡಕವಿದ ವಾತಾವರಣವಿರಲಿದ್ದು,ಗುಡುಗು ಸಹಿತ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಪ್ರಸಾದ್ ಮಾಹಿತಿ ನೀಡಿದ್ದಾರೆ.