ರಾಜ್ಯದಲ್ಲಿ ಮತ್ತೆ ಹೆಚ್ಚಲಿದೆ ಮಳೆ ಅಬ್ಬರ: ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

Sampriya
ಗುರುವಾರ, 17 ಅಕ್ಟೋಬರ್ 2024 (17:09 IST)
ಬೆಂಗಳೂರು: ಮೂರು ದಿನಗಳ ಧಾರಾಕಾರ ಮಳೆಗೆ ತತ್ತರಿಸಿದ ಬೆಂಗಳೂರು ಸಹಜ ಸ್ಥಿತಿಯತ್ತ ಮರಳುತ್ತಿರುವಾಗಲೇ ಮತ್ತೆ ವರುಣನ ಎಚ್ಚರಿಕೆ ಕೊಟ್ಟಿದೆ. ಅಕ್ಟೋಬರ್ 21ರವರೆಗೆ ನಗರದಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. 7 ಜಿಲ್ಲೆಗಳಲ್ಲಿ ಇಂದು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಅ.21ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಧಾರವಾಡ ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಅ.19ರವರೆಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಕರಾವಳಿ, ಉತ್ತರ, ದಕ್ಷಿಣ ಒಳನಾಡಿನಲ್ಲಿ ಇಂದು ವ್ಯಾಪಕ ಮಳೆಯಾಗಿದೆ.

ಮಂಗಳೂರು, ಹಾವೇರಿ, ತುಮಕೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ದಾವಣಗೆರೆಯಲ್ಲಿ 9 ಸೆಂ.ಮೀ ಮಳೆಯಾಗಿದೆ. ನಿನ್ನೆಯಿದ್ದ ವಾಯುಭಾರ ಕುಸಿತ ಇಂದು ದುರ್ಬಲವಾಗಿದೆ. ಗಾಳಿಯ ಪರಿಚಲನೆ ಆಂಧ್ರದ ಕರಾವಳಿಯಲ್ಲಿ 5.8 ಕಿ.ಮೀ ಎತ್ತರದಲ್ಲಿದೆ ಎಂದು ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments