ಸೆ.6ರವರೆಗೆ ರಾಜ್ಯದಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

Webdunia
ಗುರುವಾರ, 2 ಸೆಪ್ಟಂಬರ್ 2021 (20:19 IST)
ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆ.5 ಮತ್ತು 6ರಂದು ಗುಡುಗು ಸಹಿತ ವ್ಯಾಪಕ ಮಳೆಯನ್ನು ನಿರೀಕ್ಷಿಸಲಾಗಿದ್ದು, ಹಲವು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.
ಸೆ.5 ಮತ್ತು 6 ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ
ಕನ್ನಡ, ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ವಿಜಯಪುರ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾಾರಿ ಜಿಲ್ಲೆಗಳಲ್ಲಿ ಸೆ.6ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನೈರುತ್ಯ ಮುಂಗಾರು ಗುರುವಾ ಕರಾವಳಿಯಲ್ಲಿ ಚುರುಕಾಗಿತ್ತು. ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಹಾಗೂ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಎಲ್ಲ ಸ್ಥಳಗಳಲ್ಲಿ ವ್ಯಾಾಪಕ ಮಳೆಯಾಗಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕೆಲವೆಡೆ ಮಾತ್ರ ಮಳೆಯಾಗಿದೆ. 
ಉಡುಪಿ ಜಿಲ್ಲೆಯ ಕೋಟದಲ್ಲಿ 9 ಸೆಂ.ಮೀ., ಸಿದ್ದಾಪುರದಲ್ಲಿ 7 ಸೆಂ.ಮೀ., ಹಾವೇರಿ ಕೆಲವರಕೊಪ್ಪದಲ್ಲಿ 6 ಸೆಂ.ಮೀ., ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಭಟ್ಕಳ, ಬಸಗೋಡ್, ಗೋಕರ್ಣ ಹಾಗೂ ಅಂಕೋಲದಲ್ಲಿ 5 ಸೆಂ.ಮೀ., ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 5 ಸೆಂ.ಮೀ., ಉತ್ತರ ಕನ್ನಡ ಜಿಲ್ಲೆಯ ಜನ್ಮನೆ, ಬೆಳ್ಳಿಕೇರಿ, ಕಾರ್ಕಳ, ತಾಳಗುಪ್ಪದಲ್ಲಿ ತಲಾ 4 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ದೊಡ್ಡ ಹೊಡೆತ, ಟಿ20 ವಿಶ್ವಕಪ್‌ಗೆ ತಿಲಕ್ ವರ್ಮಾ ಆಡೋದು ದೌಟ್‌

ಅಂಕುಶ್‌ ಭಾರದ್ವಾಜ್‌ ಮೇಲೆ ಅಪ್ರಾಪ್ತ ಶೂಟರ್‌ನಿಂದ ಲೈಂಗಿಕ ಕಿರುಕುಳ, ಕೋಚ್‌ಗೆ ಬಿಗ್‌ಶಾಕ್‌

ಬಿಜೆಪಿ ಕಾರ್ಯಕರ್ತೆಯನ್ನು ಉಗ್ರರಂತೆ ಬಂಧಿಸಲಾಗಿದೆ: ಅರಗ ಜ್ಞಾನೇಂದ್ರ

ರಾಜ್ಯಕ್ಕೆ ಬಂದು ತನ್ನನ್ನು ಪ್ರಜಾಸತ್ತಾತ್ಮಕವಾಗಿ ಎದುರಿಸಿ: ಶಾಗೆ ಮಮತಾ ಸವಾಲು

ಬಳ್ಳಾರಿ ಶೂಟೌಟ್ ಪ್ರಕರಣ, ಸಿಬಿಐಗೆ ವಹಿಸುವ ಬಗ್ಗೆ ಡಾ.ಜಿ.ಪರಮೇಶ್ವರ್ ಮಹತ್ವದ ಮಾಹಿತಿ

ಮುಂದಿನ ಸುದ್ದಿ
Show comments