Select Your Language

Notifications

webdunia
webdunia
webdunia
webdunia

ರಾಜಧಾನಿಯಲ್ಲಿ 3 ದಿನ ಮಳೆ ಆರ್ಭಟ

ರಾಜಧಾನಿಯಲ್ಲಿ 3 ದಿನ ಮಳೆ ಆರ್ಭಟ
ಬೆಂಗಳೂರು , ಶುಕ್ರವಾರ, 1 ಜುಲೈ 2022 (15:01 IST)
ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು , ಮುಂದಿನ 48 ಗಂಟೆಗಳಲ್ಲಿ ಮಳೆ ಆರ್ಭಟ ಇನ್ನಷ್ಟು ಹೆಚ್ಚಲಿದೆ . ಈ ಸಂಬಂಧ ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದ್ದು , ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಇನ್ನೂ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ .
ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯ ಆರ್ಭಟ ಜೋರಾಗಿ ಇರಲಿದೆ . ಇನ್ನೂಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ , ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ . ದಕ್ಷಿಣ ಕನ್ನಡ , ಮಂಗಳೂರಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು , ಇಂದು ಕೂಡ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ . ಜುಲೈ 2 ರಿಂದ 4 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ .

Share this Story:

Follow Webdunia kannada

ಮುಂದಿನ ಸುದ್ದಿ

ನಗರದಲ್ಲಿ ಮನೆ ಕಳ್ಳರ ಕೈಚಳಕ ..!!!