ಆಗಸ್ಟ್ 13ರವರೆಗೆ ವ್ಯಾಪಾಕ ಮಳೆ: ಹವಾಮಾನ ಇಲಾಖೆ

Webdunia
ಸೋಮವಾರ, 9 ಆಗಸ್ಟ್ 2021 (20:45 IST)

ಬೆಂಗಳೂರು: ನೈರುತ್ಯ ಮುಂಗಾರು ಸೋಮವಾರ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಇಳಿಕೆಯಾಗಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ವ್ಯಾಪಕ ಮಳೆಯಾಗಿದೆ.

ಬೆಳಗಾವಿಯ ಕಟ್ಕೋಲ್‌ನಲ್ಲಿ 4 ಸೆಂ.ಮೀ., ಬಾಗಲಕೋಟೆಯ ಕೆರೂರು, ಕೊಡಗಿನ ಭಾಗಮಂಡಲ, ಮೈಸೂರಿನ ಸಾಲಿಗ್ರಾಮ, ಬೆಂಗಳೂರು ನಗರ, ಚಿಕ್ಕಮಗಳೂರಿನ ಕೊಟ್ಟಿಗೆಹಾರ, ಹೊಸದುರ್ಗದಲ್ಲಿ ತಲಾ 3 ಸೆಂ.ಮೀ., ಉಡುಪಿಯ ಕೊಲ್ಲೂರು, ಕೋಲಾರ, ದಾವಣಗೆರೆಯ ಚನ್ನಗಿರಿಯಲ್ಲಿ ತಲಾ 2 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೇಶಕ ಸಿ.ಎಲ್. ಪಾಟೀಲ್ ತಿಳಿಸಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 10ರಿಂದ 13ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಕೆಲವೆಡೆ ಹಾಗೂ ದಕ್ಷಿಣ ಒಳನಾಡಿನಲ್ಲಿ ಬುಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳವರೆಗೆ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 29 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments