Publish Date: Thu, 26 Oct 2017 (14:45 IST)
Updated Date: Thu, 26 Oct 2017 (14:48 IST)
ಮೈಸೂರು: ಅಸಮಾಧಾನ ಮುಂದುವರಿಸಿರುವ ಮಾಚಿ ಸಚಿವ ವಿಜಯಶಂಕರ್ ರಾಜ್ಯ ರೈತ ಸಮಾವೇಶಕ್ಕೆ ಗೈರಾಗುವ ಮೂಲಕ ಪಕ್ಷದ ನಾಯಕರಿಗೆ ಸಡ್ಡು ಹೊಡೆದಿದ್ದಾರೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ ಬೃಹತ್ ರೈತ ಸಮಾವೇಶ ಆಯೋಜಿಸಿತ್ತು. ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾಗಿರುವ ಸಿ.ಎಚ್.ವಿಜಯ ಶಂಕರ್ ತಮ್ಮ ತವರು ಜಿಲ್ಲೆಯಲ್ಲಿ ನಡೆಯುತ್ತಿರುವ ಸಮಾವೇಶಕ್ಕೆ ಗೈರಾಗುವ ಮೂಲಕ ನಾಯಕರಿಗೂ ಬಂಡಾಯದ ಬಿಸಿ ಮುಟ್ಟಿಸಿದ್ದಾರೆ.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ರೈತ ಸಮಾವೇಶಕ್ಕೆ ಗೈರಾಗುವ ಮೂಲಕ ಪಕ್ಷ ಬಿಡುವುದನ್ನು ಖಚಿತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್, ಎಸ್.ರಾಮದಾಸ್, ಎಂ. ಶಿವಣ್ಣ, ಸಂಸದರಾದ ಪ್ರತಾಪ್ ಸಿಂಹ, ಶ್ರೀರಾಮುಲು ಸೇರಿದಂತೆ ಪಕ್ಷದ ಮುಖಂಡರು ಭಾಗಿಯಾಗಿದ್ದಾರೆ.