ಸಿಲಿಕಾನ್ ಸಿಟಿಯಲ್ಲಿ 17 ವರ್ಷದ ಬಾಲಕಿ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಬಾಲಕಿ ಪೋಷಕರು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪರಿಚಯವಿರುವ ಯುವಕರೇ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು, ಬೇರೆ ಬೇರೆ ಸಮಯದಲ್ಲಿ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆಯ ಪೋಷಕರು ದೂರಿದ್ದಾರೆ. ಅಷ್ಟೇ ಅಲ್ಲದೇ, ಆರೋಪಿಗಳು ಬಾಲಕಿಯ ಕೆಲ ಖಾಸಗಿ ಫೋಟೋ ಹಾಗೂ ವಿಡಿಯೋ ಇಟ್ಟುಕೊಂಡು ಬೆದರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.