Select Your Language

Notifications

webdunia
webdunia
webdunia
webdunia

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

Minister KN Rajanna

Sampriya

ತುಮಕೂರು , ಶನಿವಾರ, 6 ಡಿಸೆಂಬರ್ 2025 (22:11 IST)
ತುಮಕೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಶಿವಕುಮಾರ್ ಸಂಪುಟದಲ್ಲಿ ಮಂತ್ರಿ ಆಗಲು ಇಷ್ಟ ಪಡೋದಿಲ್ಲ ಎಂದು ಮಾಜಿ ಸಚಿವ ಕೆ ಎನ್ ರಾಜಣ್ಣ  ಪ್ರತಿಕ್ರಿಯಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮದವರು ನಿಮಗೆ ಮತ್ತೇ ಮಂತ್ರಿಗಿರಿ ಕೊಡಬೇಕು ಎಂದು ನಿಮ್ಮ ಬೆಂಬಲಿಗ ಶಾಸಕರು ಒತ್ತಾಯಿಸುತ್ತಿದ್ದಾರಲ್ಲ ಎಂದು ಪ್ರಶ್ನೆಸಿದ್ದಕ್ಕೆ ನಾನು ಯಾವುದೇ ಕಾರಣಕ್ಕೂ ಡಿಕೆ ಶಿವಕುಮಾರ್ ಅವರ ಸಂಪುಟದಲ್ಲಿ ಮಂತ್ರಿಯಾಗಿರಲು ಇಷ್ಟ ಪಡುವುದಿಲ್ಲ ಎಂದು ಹೇಳಿದರು. 

ನನ್ನ ಬದಲು ಬೇರೆಯವರಿಗೆ ಅವಕಾಶ ಮಾಡಿಕೊಡಲಿ ಎಂದು ಹೇಳಿದ್ದಾರೆ. ಅಲ್ಲದೇ ಅವರೇನು ಸಿಎಂ ಆಗಿಯೇ ಬಿಡುತ್ತಾರೆ ಅಂದುಕೊಂಡಿದ್ದೀರಾ ಎಂದು ಪ್ರಶ್ನೆ ಮಾಡಿದರು. 

ನಾನು ಯಾವತ್ತೂ ಅಧಿಕಾರದ ಹಿಂದೆ ಹೋದವನಲ್ಲ, ನನಗೆ ಮತ್ತೇ ಸಚಿವ ಸ್ಥಾನ ಕೊಡುವಂತೆ ಆಗ್ರಹಿಸುತ್ತಿರುವ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ