Publish Date: Fri, 13 May 2022 (20:18 IST)
Updated Date: Fri, 13 May 2022 (20:22 IST)
ಭಾರತದ ನೂತನ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಅವರನ್ನು ನೇಮಕಗೊಳಿಸಿ ಕಾನೂನು ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕೇಂದ್ರ ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ರಾಜೀವ್ ಕುಮಾರ್ ಮೆ.15 ಅಂದರೆ ಇದೇ ಭಾನುವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ.ಪ್ರಸ್ತುತ ಹಾಲಿ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ನಾಳೆ ನಿವೃತ್ತಿ ಹೊಂದಲಿದ್ದಾರೆ. ಪ್ರಸ್ತುತ ಸುಶೀಲ್ ಚಂದ್ರ ಭಾರತದ 24ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಚುನಾವಣಾ ಆಯೋಗದ ಮುಖ್ಯಸ್ಥರಾಗಿದ್ದ ಸುನೀಲ್ ಅರೋರಾ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಿ 2021ರ ಏಪ್ರಿಲ್ 12ರಂದು ನಿವೃತ್ತಿ ಹೊಂದಿದ್ದರು. ಕಳೆದ 2019ರ ಫೆಬ್ರವರಿ 15ರಿಂದ ಚುನಾವಣಾ ಆಯೋಗದಲ್ಲಿ ಸುಶೀಲ್ ಚಂದ್ರ ಸೇವೆ ಸಲ್ಲಿಸುತ್ತಿದ್ದಾರೆ.