Select Your Language

Notifications

webdunia
webdunia
webdunia
webdunia

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ

Rajkaluve Encroachment Clearing Operation in Mahadevpur Zone
bangalore , ಗುರುವಾರ, 22 ಡಿಸೆಂಬರ್ 2022 (21:08 IST)
ಬಿಬಿಎಂಪಿ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಇಂದು ಮುನ್ನೇನಕೊಳಲು, ಶಾಂತಿನಿಕೇತನ ಲೇಔಟ್ ಹಾಗೂ ಎಬಿಕೆ ಹಳ್ಳಿಯಲ್ಲಿ 6 ಒತ್ತುವರಿಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ.  ಮುನ್ನೇನಕೊಳಲು ಹಾಗೂ ಶಾಂತಿನಿಕೇತನ ಲೇಔಟ್ ನಲ್ಲಿ 30*40 ಅಡಿ ಸ್ಥಳದಲ್ಲಿ ರಾಜಕಾಲುವೆಯ ಮೇಲೆ ನಿರ್ಮಿಸಿದ್ದ 2 ಕಟ್ಟಡವನ್ನು ಇಂದು ನೆಲಸಮಗೊಳಿಸಲಾಗಿದೆ.ಇದೇ ಸ್ಥಳದಲ್ಲಿ ರಾಜಕಾಲುವೆಯ ಮೇಲೆ ನಿರ್ಮಿಸಿದ್ದ 2 ಶೆಡ್ ಗಳನ್ನು ಕೂಡಾ ತೆರವುಗೊಳಿಸಲಾಗಿದೆ. ಮುಂದುವರಿದು, ಅಮಾನಿ ಬೆಳ್ಳಂದೂರು ಖಾನೆಹಳ್ಳಿ ವ್ಯಾಪ್ತಿಯಲ್ಲಿ ರಾಜಕಾಲುವೆ ಮಾರ್ಗದಲ್ಲಿ ನಿರ್ಮಿಸಿದ್ದ 1 ಶೆಡ್ ಹಾಗೂ ಸುಮಾರು 60 ಮೀಟರ್ ಉದ್ದದ ಕಾಂಪೌಂಡ್ ಗೋಡೆಯನ್ನು ತೆರವುಗೊಳಿಸಲಾಗಿದೆ. ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬೆಂಗಳೂರು ನಗರ ಜಿಲ್ಲೆಯ ತಹಶೀಲ್ದಾರರು ಒತ್ತುವರಿದಾರರಿಗೆ ನೋಟಿಸ್ ಜಾರಿ ಮಾಡಿ ಆದೇಶ ಹೊರಡಿಸಿದ ನಂತರ ಬಾಕಿ ಒತ್ತುವರಿಗಳ ತೆರವು ಕಾರ್ಯಾಚರಣೆಯನ್ನು ನಡೆಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಐನತಿ ಕಳ್ಳ ಅಂದರ್