Publish Date: Fri, 29 Oct 2021 (16:15 IST)
Updated Date: Fri, 29 Oct 2021 (16:18 IST)
ಇಹಲೋಕ ತ್ಯಜಿಸಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ನಾಳೆ (ಶನಿವಾರ) ಸಂಜೆಯೊಳಗೆ ನಡೆಸಲು ಕುಟುಂಬ ಸದಸ್ಯರು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಸಂಜೆ 5 ಗಂಟೆಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ.ಇಂದು ಸಂಜೆ 5 ಗಂಟೆಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದ್ದು, ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಪುನೀತ್ ಅವರ ನಿವಾಸದ ಬಳಿ ಯಾರೂ ತೆರಳದಂತೆ ಸರಕಾರ ಮನವಿ ಮಾಡಿದ್ದು, ಅಭಿಮಾನಿಗಳು ಭಾವೋದ್ವೇಗಕ್ಕೆ ಒಳಗಾಗ ಬೇಡಿ. ಶಾಂತ ರೀತಿಯಲ್ಲಿ ಇರಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.