Publish Date: Sun, 17 Dec 2017 (17:08 IST)
Updated Date: Sun, 17 Dec 2017 (17:16 IST)
ಬೆಂಗಳೂರು : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ತಕ್ಷಣವೇ ಪತ್ರಕರ್ತೆ ಗೌರಿ ಲಂಕೇಶ್ ಅವರ ಹಂತಕರನ್ನು ಬಂಧಿಸುವುದಾಗಿ ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ಹೇಳಿದ್ದಾರೆ.
ನಗರದ ಮುರುಗೇಶ್ ಪಾಳ್ಯದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಾಷಣ ಮಾಡಿದ ರಾಜ್‌ನಾಥ್ ಸಿಂಗ್ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು.
'ಸಿದ್ಧರಾಮಯ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಜನರ ಮೇಲೆ ಸಾಲದ ಹೊರೆ ಇರಿಸಿದೆ. ಸಾಮಾಜಿಕ ಕಾರ್ಯಕರ್ತರ ಹತ್ಯೆಗಳು ನಡೆಯುತ್ತಿವೆ. ಪತ್ರಕರ್ತರ ಹತ್ಯೆ ನಡೆದಿದೆ. ಸರ್ಕಾರಿ ಕಚೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಇದನ್ನೆಲ್ಲಾ ತಡೆಯಲು ಯಡಿಯೂರಪ್ಪ ಅವರ ಕೈಗೆ ಅಧಿಕಾರ ನೀಡಿ' ಎಂದು ಹೇಳಿದರು. ನಾವು ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಶಾಂತಿ ಕಾಪಾಡುತ್ತೇವೆ, ದುಷ್ಕರ್ಮಿಗಳನ್ನು ಮಟ್ಟ ಹಾಕುತ್ತೇವೆ ಎಂದು ಭರವಸೆ ನೀಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ