Select Your Language

Notifications

webdunia
webdunia
webdunia
webdunia

ರಾಜ್ಯಸಭೆ ಚುನಾವಣೆ: ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ,ಇಲ್ಲಿದೆ ಮಾಹಿತಿ

Rajya Sabha elections
Photo Courtesy X
ಕರ್ನಾಟಕ ವಿಧಾನಸಭೆಯಿಂದ ಆಯ್ಕೆಯಾಗಬೇಕಾದ ರಾಜ್ಯಸಭೆಯ ಮೂರು ಸ್ಥಾನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಕ್ತಾರ ಪವನ್ ಖೇರಾ, ಮನ್ಸೂರ್ ಅಲಿಖಾನ್ ಅವರ ಹೆಸರನ್ನು ಕಾಂಗ್ರೆಸ್ ಅಂತಿಮಗೊಳಿಸಿದ್ದು, ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ.  

ಖರ್ಗೆಯವರು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿದ್ದು, ಸದ್ಯ ಅವರು ಕರ್ನಾಟಕವನ್ನು ಪ್ರತಿನಿಧಿಸುತ್ತಿದ್ದಾರೆ. ರಾಜ್ಯಸಭೆಯ ಉಪಸಭಾಪತಿಯಾಗಿದ್ದ ಹಾಗೂ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಪುತ್ರ ಮನ್ಸೂರ್ ಖಾನ್ ಅವರಿಗೆ ಎಐಸಿಸಿ ಅವಕಾಶ ಕಲ್ಪಿಸಿದೆ. 

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ನಾರಾಯಣ ಕೊರಗಪ್ಪ, ಈರಣ್ಣ ಕಡಾಡಿ ಅವರ ಅವಧಿ ಮುಕ್ತಾಯವಾಗುತ್ತದೆ. 

ಕರ್ನಾಟಕದಿಂದ ಆಯ್ಕೆಯಾಗಬೇಕಾದ ರಾಜ್ಯಸಭೆಯ ಈ ನಾಲ್ಕು ಸ್ಥಾನಗಳು ಸೇರಿ ರಾಜ್ಯಸಭೆಯ ಒಟ್ಟು 24 ಸ್ಥಾನಗಳಿಗೆ ಇದೇ 18ರಂದು ಚುನಾವಣೆ ನಿಗದಿಯಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಮೂರು ಹಾಗೂ ಬಿಜೆಪಿಗೆ ಒಂದು ಸ್ಥಾನ ಸಿಗಲಿದೆ.

ಇನ್ನೂ ನಾಮಪತ್ರ ಸಲ್ಲಿಕೆಗೆ ಜೂನ್‌ 8ಕ್ಕೆ ಕೊನೆಯ ದಿನ. ನಾಮಪತ್ರಗಳ ಪರಿಶೀಲನೆ 9ಕ್ಕೆ ನಡೆಯಲಿದ್ದು, ನಾಮಪತ್ರ ಹಿಂದಕ್ಕೆ ಪಡೆಯಲು 10 ಕೊನೆ ದಿನ. 18ರಂದು ಮತದಾನ ನಡೆಯಲಿದೆ. ಮತಗಳ ಎಣಿಕೆ ಸಂಜೆ 5ಕ್ಕೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕಚೇರಿ ಒಳಗಡೆಯೇ ಮಾಜಿ ಪ್ರೇಯಸಿಯನ್ನು ಕೊಚ್ಚಿಕೊಂದ ಯುವಕ, Video