Publish Date: Mon, 12 Mar 2018 (09:18 IST)
Updated Date: Mon, 12 Mar 2018 (09:19 IST)
ಬೆಂಗಳೂರು: ಮಾರ್ಚ್ 23 ರಂದು ನಡೆಯಲಿರುವ ರಾಜ್ಯ ಸಭೆ ಚುನಾವಣೆಗೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ.
ಕಾಂಗ್ರೆಸ್ ನಿಂದ ಮೂರು, ಜೆಡಿಎಸ್ ಮತ್ತು ಬಿಜೆಪಿಯಿಂದ ತಲಾ ಒಂದು ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗಿದೆ.
ಕಾಂಗ್ರೆಸ್ ಡಾ. ಎಲ್ ಹನುಮಂತಯ್ಯ, ಸೈಯದ್ ನಸೀರ್ ಹುಸೈನ್ ಮತ್ತು ಜಿ ಸಿ ಚಂದ್ರಶೇಖರ್ ಅವರನ್ನು ಕಣಕ್ಕಿಳಿಸಿದೆ. ಅತ್ತ ಬಿಜೆಪಿ ಮತ್ತೆ ಉದ್ಯಮಿ ರಾಜೀವ್ ಚಂದ್ರಶೇಖರ್ ಗೆ ಮಣೆ ಹಾಕಿದೆ. ಜೆಡಿಎಸ್ ನಿಂದ ಬಿಎಂ ಫಾರುಖ್ ಸ್ಪರ್ಧಿಸಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ