Webdunia - Bharat's app for daily news and videos

Install App

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಬೆಂಬಲಿಗನಿಂದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ

Krishnaveni K
ಮಂಗಳವಾರ, 27 ಫೆಬ್ರವರಿ 2024 (20:38 IST)
Photo Courtesy: Twitter
ಬೆಂಗಳೂರು: ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಹೆಚ್ಚು ಸ್ಥಾನ ಗೆದ್ದ ಖುಷಿಯಲ್ಲಿರುವ ಬೆನ್ನಲ್ಲೇ ಕಾಂಗ್ರೆಸ್ ಗೆ ಹೊಸ ಸಂಕಷ್ಟವೊಂದು ಎದುರಾಗಿದೆ. ಕಾಂಗ್ರೆಸ್ ನಿಂದ ಗೆದ್ದ ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗನೊಬ್ಬ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ.

ಗೆಲುವಿನ ಖುಷಿಯಲ್ಲಿ ನಾಸೀರ್ ಹುಸೇನ್ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗ ಅವರ ಹಿಂದೆ ನಿಂತಿದ್ದ ಬೆಂಬಲಿಗನೊಬ್ಬ ಜಿಂದಾಬಾದ್ ಜಿಂದಾಬಾದ್ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದಾನೆ. ಎರಡೆರಡು ಬಾರಿ ಈ ರೀತಿ ಹೇಳಿರುವ ವಿಡಿಯೋವೊಂದು ಈಗ ವೈರಲ್ ಆಗಿದೆ. ತಕ್ಷಣವೇ ಪ್ರಮಾದ ಅರಿವಾಗಿ ಅಲ್ಲಿದ್ದವರು ಆತನ ಬಾಯಿ ಮುಚ್ಚಿಸಿದ್ದಾರೆ.

ಇದನ್ನು ಮಾಧ್ಯಮದವರು ಪ್ರಶ್ನಿಸಲು ಹೊರಟಾಗ ಅವರ ಮೇಲೆಯೇ ನಾಸೀರ್ ಹುಸೇನ್ ರೋಷಾವೇಷ ತೋರಿಸಲು ಮುಂದಾಗಿದ್ದಾರೆ. ಈ ವಿಡಿಯೋಗೆ ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ. ಇನ್ನು ಪ್ರತಿಪಕ್ಷ ಬಿಜೆಪಿ ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದೆ.

ರಾಜ್ಯಸಭೆಯಲ್ಲಿ ಅತೀ ಹೆಚ್ಚು ಸೀಟು ಗೆದ್ದ ಖುಷಿಯಲ್ಲಿದ್ದ ಕಾಂಗ್ರೆಸ್ ಈಗ ಅನಗತ್ಯ ವಿವಾದವೊಂದನ್ನು ಮೈಮೇಲೆಳೆದುಕೊಂಡಿದೆ. ವಿಪಕ್ಷಗಳು ಈ ವಿಚಾರವನ್ನು ಸದನದಲ್ಲೂ ಪ್ರಸ್ತಾಪಿಸಲು ಹೊರಟಿದ್ದಾರೆ. ಹೀಗಾಗಿ ಈ ವಿಚಾರ ದೊಡ್ಡದಾಗುವ ಎಲ್ಲಾ ಲಕ್ಷಣಗಳೂ ಕಾಣಿಸುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಧರ್ಮಸ್ಥಳ ಕೇಸ್: ಕೊನೆಗೂ ಆ ಮಹತ್ವದ ತನಿಖೆಗೆ ಸಮಯ ಬಂದೇ ಬಿಡ್ತು

ಕೆಎನ್ ರಾಜಣ್ಣ ವಜಾ ಇಫೆಕ್ಟ್: ರಾಹುಲ್ ಗಾಂಧಿ ಕೆಲಸದಿಂದ ಇವರಿಗೆಲ್ಲಾ ನಡುಕ ಶುರು

ಮುಂದಿನ ಸುದ್ದಿ
Show comments