Publish Date: Fri, 03 Jun 2016 (15:57 IST)
Updated Date: Fri, 03 Jun 2016 (16:00 IST)
ರಾಜ್ಯಸಭೆ ಚುನಾವಣೆಗೆ ಮತ ನೀಡಲು ಶಾಸಕರಿಂದ ಕೋಟಿ ಕೋಟಿ ಹಣದ ಬೇಡಿಕೆ ಪ್ರಕರಣ ದುರ್ದೈವದ ಸಂಗತಿ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಬೇಸರ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ರಾಜ್ಯಸಭೆ ಚುನಾವಣೆಗೆ ಶಾಸಕರು ತಮ್ಮ ಮತಗಳನ್ನು ಮಾರಾಟ ಮಾಡಿಕೊಳ್ಳುವುದು ದುರ್ದೈವದ ಸಂಗತಿ. ಜನಪ್ರತಿನಿಧಿಗಳ ಹಣಕ್ಕಾಗೆ ಇಷ್ಟು ಕೀಳು ಮಟ್ಟಕ್ಕಿಳಿಯಬಾರದು ಎಂದು ಹೇಳಿದ್ದಾರೆ.
ಕೆಲವು ರಾಜಕಾರಣಿಗಳಿಂದ ಎಲ್ಲ ರಾಜಕಾರಣಿಗಳನ್ನು ಅನುಮಾನಿಸುವ ದಿನಗಳು ಎದುರಾಗುತ್ತಿವೆ. ಆದರೆ, ಎಲ್ಲ ಶಾಸಕರು ಇಷ್ಟು ಕೀಳು ಮಟ್ಟಕ್ಕಿಳಿಯಲು ಸಾಧ್ಯವಿಲ್ಲ. ಹಣವಿದ್ದರೆ ಮಾತ್ರ ರಾಜ್ಯಸಭೆ ಚುನಾವಣೆಗೆ ಸ್ವರ್ಧೆ ಮಾಡಬಹುದು ಎಂದು ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನೆಯಾಗುತ್ತಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.