ಇಂದು ನಡೆಯಬೇಕಿದ್ದ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭ ರದ್ದು

ಗುರುವಾರ, 1 ನವೆಂಬರ್ 2018 (07:40 IST)
ಬೆಂಗಳೂರು: ಕನ್ನಡ ರಾಜ್ಯೋತ್ಸವ ದಿನವಾದ ಇಂದು ರಾಜ್ಯ ಸರ್ಕಾರದ ವತಿಯಿಂದ ನಡೆಯಬೇಕಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭ ಮುಂದೂಡಲಾಗಿದೆ.

ಬಳ್ಳಾರಿ, ಶಿವಮೊಗ್ಗ, ರಾಮನಗರ, ಮಂಡ್ಯ ಸೇರಿದಂತೆ ಐದು ಕ್ಷೇತ್ರಗಳಲ್ಲಿ ಲೋಕಸಭೆ ಉಪಚುನಾವಣೆ ನಡೆಯಲಿರುವುದರಿಂದ ರಾಜ್ಯ ಸರ್ಕಾರಕ್ಕೆ ಚುನಾವಣಾ ನೀತಿ ಸಂಹಿತೆ ಅನ್ವಯವಾಗುತ್ತದೆ.

ಇದೇ ಕಾರಣಕ್ಕೆ ಪ್ರತಿ ವರ್ಷದಂತೆ ಇಂದು ನಡೆಯಬೇಕಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮುಂದೂಡಲಾಗಿದೆ. ಚುನಾವಣೆ ಮುಗಿದ ಬಳಿಕ ಪ್ರಶಸ್ತಿ ಪ್ರಧಾನ ಸಮಾರಂಭ ಏರ್ಪಡಿಸಲಾಗುವುದು ಎಂದು ಮುಖ್ಯಮಂತ್ರಿಗಳ ಕಚೇರಿ ಮಾಧ್ಯಮ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ 1 ಸಾವಿರ ರೂ. ದಂಡ ವಿಧಿಸಲು ಕಾರಣವೇನು?