Publish Date: Thu, 02 Aug 2018 (17:10 IST)
Updated Date: Thu, 02 Aug 2018 (17:16 IST)
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ ಹಾವೇರಿಯಲ್ಲಿ ವಿವಿಧ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು.
ಉತ್ತರ ಕರ್ನಾಟಕ ರೈತ ಸಂಘ, ವಕೀಲರು ಸೇರಿದಂತೆ ವಿವಿಧ ಸಂಘಟನೆಯವರು ರ್ಯಾಲಿಯಲ್ಲಿ ಭಾಗವಹಿಸಿದ್ದರು. ನಗರದ ಬೀದಿ ಬೀದಿಗಳಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಘೋಷಣೆಗಳನ್ನು ಕೂಗುವುದರ ಮೂಲಕ ಸಿದ್ದಪ್ಪ ವೃತ್ತದಲ್ಲಿ 1 ಗಂಟೆಗೂ ಹೆಚ್ಚು ರಸ್ತೆ ತಡೆ ನಡೆಸಿದ್ರು.
ಪದೇ ಪದೇ ಅನ್ಯಾಯಕ್ಕೆ ಒಳಗಾಗುತ್ತಿರುವ ಹಾಗೂ ಅಭಿವೃದ್ಧಿಯಲ್ಲಿ ಹಿಂದೆ ಉಳಿದಿರುವ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದರು.