Select Your Language

Notifications

webdunia
webdunia
webdunia
webdunia

'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಮಮಂದಿರ ಕೆಡವುತ್ತಾರೆ: ಮೋದಿ ವಾಗ್ದಾಳಿ

India Alliance

Sampriya

ಲಖನೌ , ಶುಕ್ರವಾರ, 17 ಮೇ 2024 (16:35 IST)
ಲಖನೌ: ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಮಮಂದಿರವನ್ನು ಬುಲ್ಡೋಜರ್‌ಗಳಿಂದ ಕೆಡವುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ಲೋಕಸಭೆ ಚುನಾವಣೆ ಹಿನ್ನೆಲೆ ಉತ್ತರಪ್ರದೇಶದ ಬಾರಾಬಂಕಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು ಅಯೋಧ್ಯೆ ರಾಮಮಂದಿರದ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಬದಲಾಯಿಸಲು ಎಸ್‌ಪಿ-ಕಾಂಗ್ರೆಸ್ ನಾಯಕರು  ಬಯಸುತ್ತಿದ್ದಾರೆ. ಅಂತವರಿಗೆ ನಾವು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ವಾಗ್ದಾಳಿ ನಡೆಸಿದರು.

ಇನ್ನೂ ಲೋಕಸಭೆ ಚುನಾವಣೆಗೆ ಮತದಾನ ಹಂತದಲ್ಲೇ ಇಂಡಿಯಾ ಮೈತ್ರಿಕೂಟ ಪತನವಾಗುವ ಲಕ್ಷಣಗಳು ಕಾಣಿಸುತ್ತಿದೆ ಎಂದರು.

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನಾಯಕಿ ಸ್ಮೃತಿ ಇರಾನಿ ವಿರುದ್ಧ ಸೋತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಾರಿ ಅಮೇಠಿಯಿಂದ ಓಡಿ ಹೋಗಿದ್ದಾರೆ ಎಂದು ವ್ಯಂಗ್ಯ ಮಾಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಭದ್ರತೆ ದೃಷ್ಟಿಯಿಂದ ಇನ್ಮುಂದೆ ವಿಧಾನಸೌಧಕ್ಕೆ ಬೇಕಾಬಿಟ್ಟಿ ಪ್ರವೇಶವಿಲ್ಲ: ಸಚಿವ ಪರಮೇಶ್ವರ್