Publish Date: Thu, 15 Mar 2018 (15:26 IST)
Updated Date: Thu, 15 Mar 2018 (15:31 IST)
ಬೆಂಗಳೂರು : ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಗುರುವಾರ (ಇಂದು) ಪೊಲೀಸ್ ಅಧಿಕಾರಿಗಳ ಸಭೆ ಕರೆದ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಸಭೆಯಲ್ಲಿ ಮಾತನಾಡಿದ ಅವರು,’ ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕ್ರೈಂ ಹೆಚ್ಚಾಗುತ್ತಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ. ಚುನಾವಣೆ ಹೊಸ್ತಿಲಲ್ಲಿ ಇದು ಸರ್ಕಾರದ ಮೇಲೆ ಪರಿಣಾಮ ಬೀರುತ್ತೆ. ನಗರದಲ್ಲಿ ಹೆಚ್ಚುತ್ತಿರುವ ಗೂಂಡಾಗಳನ್ನು ಮಟ್ಟಹಾಕಿ’ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ