Publish Date: Thu, 22 Feb 2018 (17:35 IST)
Updated Date: Thu, 22 Feb 2018 (17:36 IST)
ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೇನಾಮಿ ಹೆಸರಿನಲ್ಲಿ ಗೃಹ ಸಚಿವರು ಆಸ್ತಿ ಮಾಡಿರುವ ಆರೋಪ ಬೆಳಕಿಗೆ ಬಂದಿದೆ. ಆದ್ದರಿಂದ ಅವರು ರಾಜೀನಾಮೆ ನೀಡಬೇಕು ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕರಿಂದ ದಬ್ಬಾಳಿಕೆ ಹೆಚ್ಚಾಗುತ್ತಿರುವುದು ಸರಿಯಲ್ಲ ಎಂದ ಅವರು, ಜನರೇ ಬುದ್ದಿ ಕಲಿಸುತ್ತಾರೆ ಎಂದಿದ್ದಾರೆ.
ಪಿಎಫ್‍ಐ ಸಂಘಟನೆಯನ್ನು ಜಾರ್ಖಂಡ್‍ನಲ್ಲಿ ಬ್ಯಾನ್ ಮಾಡಲಾಗಿದ್ದು, ಕೇರಳದಲ್ಲೂ ಬ್ಯಾನ್ ಮಾಡಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಶಿಫಾರಸು ಮಾಡಲಾಗಿದೆ. ರಾಜ್ಯದಲ್ಲೂ ಬ್ಯಾನ್ ಮಾಡಲು ಹೋರಾಟ ಮಾಡುತ್ತಿದ್ದೇವೆ. ಆದರೂ ರಾಜ್ಯ ಸರ್ಕಾರ ವೋಟ್ ಬ್ಯಾಂಕಿಗಾಗಿ ಚಕಾರ ಎತ್ತುತ್ತಿಲ್ಲ ಎಂದು ಟೀಕಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.