Publish Date: Fri, 05 Jun 2026 (09:55 IST)
Updated Date: Fri, 05 Jun 2026 (10:00 IST)
ಬೆಂಗಳೂರು: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎರಡೇ ದಿನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಡಿಕೆ ಶಿವಕುಮಾರ್ ಸಂಪುಟದಲ್ಲಿ ಪ್ರಮಾಣ ವಚನ ಸ್ವೀಕರಿಸಿದ 13 ಶಾಸಕರ ಪೈಕಿ ರಾಮಲಿಂಗಾ ರೆಡ್ಡಿ ಕೂಡಾ ಒಬ್ಬರು. ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಬೇಕು ಎಂಬ ಬೇಡಿಕೆಯಿತ್ತು. ಆದರೆ ಆ ಖಾತೆಯ ಬದಲು ಜಲಸಂಪನ್ಮೂಲ ಖಾತೆ ನೀಡಲಾಗಿದೆ. ಇದು ಅವರ ಬೇಸರಕ್ಕೆ ಕಾರಣವಾಗಿದೆ.
ರಾಮಲಿಂಗಾ ರೆಡ್ಡಿ ಅವರ ಮನವೊಲಿಕೆಗೆ ಕಾಂಗ್ರೆಸ್ ನಾಯಕರು ಇಂದು ಪ್ರಯತ್ನ ನಡೆಸಿದ್ದಾರೆ. ಆದರೂ ಅವರು ಯಾವುದೇ ಮನವೊಲಿಕೆಗೆ ಒಪ್ಪಲಿಲ್ಲ. ತಮಗೆ ನಗರಾಭಿವೃದ್ಧ ಖಾತೆಯೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಇದೇ ಕಾರಣಕ್ಕೆ ಈಗ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎರಡೇ ದಿನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಮಲಿಂಗಾ ರೆಡ್ಡಿ ನಮ್ಮ ಹಿರಿಯ ನಾಯಕರು. ಅವರ ಸೇವೆ ನಮಗೆ ಅಗತ್ಯವಿದೆ. ಅವರ ಸಮಸ್ಯೆ ಬಗ್ಗೆ ಹೈಕಮಾಂಡ್ ನಾಯಕರು ಬಗೆ ಹರಿಸ್ತಾರೆ ಎಂದಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ