ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಶೇ.15 ರಷ್ಟು ಏರಿಕೆಯಾಗಲು ಹಿಂದಿದ್ದ ಬಿಜೆಪಿ ಕಾರಣ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಮರ್ಥಿಸಿಕೊಂಡರು.
ಹಿಂದಿನ ಸರ್ಕಾರ ನಮ್ಮ ಮೇಲೆ ರೂ. 5,900 ಕೋಟಿ ಸಾಲವನ್ನು ಬಿಟ್ಟು ಹೋಗಿರುವುದರಿಂದ ಈಗ ಟಿಕೆಟ್ ದರ ಏರಿಕೆಯಾಗಿದೆ. ದೈನಂದಿನ ನಿರ್ವಹಣಾ ವೆಚ್ಚ ಮತ್ತು ವೇತನ ಹೆಚ್ಚಾಗಿರುವುದರಿಂದ ದರ ಏರಿಕೆ ಅಗತ್ಯವಾಗಿದೆ. ಪ್ರತಿದಿನ ಡೀಸೆಲ್ ದರ ರೂ. 9 ಕೋಟಿಯಿಂದ ರೂ. 13 ಕೋಟಿಯಾಗುತ್ತದೆ. ಅದೇ ರೀತಿ ವೇತನ ರೂ. 12 ಕೋಟಿಯಿಂದ 18 ಕೋಟಿಯಾಗುತ್ತದೆ. ಪ್ರತಿದಿನ ಸಾರಿಗೆ ನಿಗಮಗಳಿಗೆ ರೂ. 10 ಕೋಟಿಗೂ ಹೆಚ್ಚು ಹೊರೆಯಾಗುತ್ತಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರ ₹60 ಇದ್ದ ಡಿಸೇಲ್ ದರವನ್ನುಇದೀಗ ₹90ರೂಪಾಯಿಗೆ ಹೆಚ್ಚಿಸಿದೆ. ಬಿಜೆಪಿಯವರು ಪ್ರತಿಭಟನೆ ಮಾಡುವ ಮೊದಲು ಡಿಸೇಲ್ ದರವನ್ನು ಇಳಿಕೆ ಮಾಡಲಿ. ಆಮೇಲೆ ಟಿಕೆಟ್ ದರ ಏರಿಕೆ ಬಗ್ಗೆ ಮಾತನಾಡಲಿ ಎಂದರು.
ಬಿಜಪಿ ತನ್ನ ಆಡಳಿತದ ಅವಧಿಯಲ್ಲಿ ಅಷ್ಟು ಮೊತ್ತದ ಸಾಲ ಮಾಡದಿದ್ದರೆ ಕಾಂಗ್ರೆಸ್ ದರ ಏರಿಕೆಗೆ ಹೋಗುತ್ತಿರಲಿಲ್ಲ. 2020 ಜನವರಿಯಲ್ಲಿ ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಟಿಕೆಟ್ ದರವನ್ನು ಶೇ. 12 ರಷ್ಟು ಹೆಚ್ಚಳ ಮಾಡಲಾಗಿತ್ತು. ಈಗ ಬಿಜೆಪಿಯವರಿಗೆ ದರ ಏರಿಕೆ ಪ್ರಶ್ನಿಸುವ ಯಾವುದೇ ನೈತಿಕ ಹಕ್ಕಿಲ್ಲ ಎಂದರು.
ದೈನಂದಿನ ಬಸ್‌ಗಳ ನಿರ್ವಹಣೆ ಮತ್ತು ಸಂಬಳದ ವೆಚ್ಚಕ್ಕೆ ಹೋಲಿಸಿದರೆ ಟಿಕೆಟ್‌ಗಳ ಮಾರಾಟದಿಂದ ಬರುವ ಆದಾಯ ಕಡಿಮೆಯಾಗಿದೆ ಹೀಗಾಗಿ ದರ ಹೆಚ್ಚಳ ಅಗತ್ಯವಾಗಿದೆ. ಶಕ್ತಿ ಯೋಜನೆಗೆ