ರಾಮನಗರ: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಸಂಬಂಧ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಬಣದ ನಡುವೆ ಹೈಕಮಾಂಡ್‌ನಲ್ಲಿ ಶಕ್ತಿಪ್ರದರ್ಶನ ಮಾಡುತ್ತಿರುವಾಗ ಸಚಿವ ರಾಮಲಿಂಗಾ ರೆಡ್ಡಿ ಅವರು ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಒನ್ಲಿ ಶಾಂತಿ ಎಂದು ಕೂಲ್ ಆಗಿ ಪ್ರತಿಕ್ರಿಯಿಸಿದ್ದಾರೆ.
ಈ ಸಂಬಂಧ ರಾಮನಗರದಲ್ಲಿ ಮಾತನಾಡಿದ ಅವರು, ಯಾರು ದೆಹಲಿಗೆ ಹೋಗಿದ್ದಾರೆ, ಯಾಕೆ ಹೋಗಿದ್ದಾರೆ ಗೊತ್ತಿಲ್ಲ. ದೆಹಲಿಯಲ್ಲಿ ಏನೇನು ಆಗಿದ್ಯೋ ನಮಗೆ ಗೊತ್ತಿಲ್ಲ. ನಿಮಗೆ ಸಂಪೂರ್ಣ ಮಾಹಿತಿ ಬೇಕಿದ್ರೆ ಡಿಕೆಶಿ, ಡಿ.ಕೆ.ಸುರೇಶ್ ಜೊತೆ ಮಾತನಾಡಿ ಎಂದು ಹೇಳಿದರು.
ಇನ್ನೂ ಸಿಎಂ ಬದಲಾವಣೆ ಬಗ್ಗೆ ನನಗೇನು ಗೊತ್ತಿಲ್ಲ, ದಲಿತ ಸಚಿವರು ಸಭೆ ಮಾಡಿರೋದು ನನಗೆ ಗೊತ್ತಿಲ್ಲ. ಏನಾದ್ರೂ ನಾಲ್ಕು ಜನ ಊಟಕ್ಕೆ ಸೇರಿದರೆ ಅದರ ಬಗ್ಗೆ ಮಾತನಾಡಲಾಗುತ್ತಾ. ಆದರೆ ನನ್ನನ್ನು ಡಿನ್ನರ್ ಪಾಲಿಟಿಕ್ಸ್‌ಗೆ ಯಾರನ್ನೂ ಕರೆಯುತ್ತಿಲ್ಲ. ನಾನು ಯಾವ ಬಣವೂ ಅಲ್ಲ, ಕಾಂಗ್ರೆಸ್ ಬಣ. ಸರ್ಕಾರದಲ್ಲಿ ಯಾರೂ ಗೊಂದಲ ಮಾಡಿಕೊಳ್ಳಬಾರದು. ಈ ಎಲ್ಲ ಬೆಳವಣಿಗೆ ಬಗ್ಗೆ ಹೈಕಮಾಂಡ್ ತೀರ್ಮಾಣ ಕೈಗೊಳ್ಳುತ್ತೆ ಎಂದರು.