Webdunia - Bharat's app for daily news and videos

Install App

ಡಿಕೆ ಸುರೇಶ್ ಮನೆಗೆ ಬಂದು...ರಾಜೀನಾಮೆ ಬಳಿಕ ಸ್ಪೋಟಕ ಹೇಳಿಕೆ ಕೊಟ್ಟ ರಾಮಲಿಂಗಾ ರೆಡ್ಡಿ

ಕೃಷ್ಣವೇಣಿ ಕೆ
ಶುಕ್ರವಾರ, 5 ಜೂನ್ 2026 (10:47 IST)
ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಸ್ಪೋಟಕ ಹೇಳಿಕೆ ನೀಡಿದ್ದು, ರಾಜೀನಾಮೆಗೆ ಕಾರಣವನ್ನೂ ತಿಳಿಸಿದ್ದಾರೆ.

ಡಿಕೆ ಶಿವಕುಮಾರ್ ಜೊತೆ ಪ್ರಮಾಣ ವಚನ ಸ್ವೀಕರಿಸಿದ್ದ 13 ಶಾಸಕರ ಪೈಕಿ ರಾಮಲಿಂಗಾ ರೆಡ್ಡಿ ಕೂಡಾ ಒಬ್ಬರಾಗಿದ್ದರು. ನಿನ್ನೆ ಈ ಎಲ್ಲಾ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿತ್ತು. ಅದರಂತೆ ರಾಮಲಿಂಗಾ ರೆಡ್ಡಿಗೆ ಜಲಸಂಪನ್ಮೂಲ ಖಾತೆ ನೀಡಲಾಗಿತ್ತು.

ಆದರೆ ಅವರಿಗೆ ನಗರಾಭಿವೃದ್ಧಿ ಖಾತೆ ಬೇಕು ಎಂಬ ಬೇಡಿಕೆಯಿತ್ತು. ಆದರೆ ಅದನ್ನು ನೀಡದ ಕಾರಣಕ್ಕೆ ಹಿರಿಯ ಶಾಸಕ ಅಸಮಾಧಾನಗೊಂಡಿದ್ದಾರೆ. ಬೆಂಗಳೂರಿನ ಎಲ್ಲಾ ಕೆಲಸಗಳಿಗೆ ನಾನು ಬೇಕು, ಆದರೆ ನನಗೆ ಬೇಕಾದ ಖಾತೆ ಯಾಕೆ ಕೊಡಲ್ಲ ಎಂದು ಸಿಎಂ ಮುಂದೆಯೇ ಕೂಗಾಡಿದ್ದರು ಎಂದು ವರದಿಯಾಗಿದೆ. ಇದರ ಬೆನ್ನಲ್ಲೇ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಳಿಕ ಇಂದು ಮಾಧ್ಯಮಗಳ ಮುಂದೆ ಮಾತನಾಡಿರುವ ಅವರು ತಮ್ಮ ರಾಜೀನಾಮೆಗೆ ಕಾರಣ ತಿಳಿಸಿದ್ದಾರೆ. ’53 ವರ್ಷ ಕಾಂಗ್ರೆಸ್ ಗೆ ಕೆಲಸ ಮಾಡಿದ್ದೇನೆ. ಮುಂದೆಯೂ ಕಾಂಗ್ರೆಸ್ ನಲ್ಲೇ ಇರುತ್ತೇನೆ. ಎರಡೆರಡು ಬಾರಿ ನಗರಾಭಿವೃದ್ಧಿ ಖಾತೆ ಕೊಡುವುದಾಗಿ ಮಾತು ಕೊಟ್ಟು ತಪ್ಪಿದ್ದಾರೆ. ಹಿಂದೆಯೂ ನಗರಾಭಿವೃದ್ಧಿ ಖಾತೆ ಕೊಡುವುದಾಗಿ ಹೇಳಿ ಸಾರಿಗೆ ಖಾತೆ ಕೊಟ್ಟಿದ್ದರು. ಆಗಲೂ ನಾನೇನೂ ಕೇಳಿರಲಿಲ್ಲ. ಡಿಕೆ ಸುರೇಶ್ ಅವರೇ ಮನೆಗೆ ಬಂದು ಸಾರಿಗೆ ಖಾತೆ ಕೊಡುವುದಾಗಿ ಹೇಳಿದ್ದರು.ಈಗ ಎರಡನೇ ಬಾರಿ ಮಾತು ತಪ್ಪಿದ್ದಾರೆ. ಜಲಸಂಪನ್ಮೂಲ ಖಾತೆಯನ್ನು ನಾನು ಒಪ್ಪಲ್ಲ. ಅದಕ್ಕೆ ರಾಜೀನಾಮೆ ನೀಡಿದ್ದೇನೆ. ಹಾಗಂತ ನನಗೆ ಯಾರ ಮೇಲೂ ಬೇಸರವಿಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದ ಯಾವ ಭಾಗಕ್ಕೆ ಪ್ರಭಾವ ಬೀರಲಿದೆ ಗೊತ್ತಾ

ರೈಲಿನಲ್ಲಿ ಹೊದಿಕೆಗೆ ಬೆಡ್‌ಶೀಟ್‌ ಕೊಟ್ರೆ ಈ ಮೂವರು ಏನ್ ಮಾಡಿದ್ರು, ನೋಡಿ Video

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಿವಾಸಕ್ಕೆ ಉದ್ಯಮಿ ಗೌತಮ್ ಅದಾನಿ ಭೇಟಿ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮಗುವಿಗೆ ಸಿರಪ್ ನೀಡುವ ವಿಚಾರದಲ್ಲಿ ದಂಪತಿ ನಡುವೆ ಜಗಳ, ಅಂತ್ಯವಾಗಿದ್ದು ಒಬ್ಬರ ಸಾವಿನಲ್ಲಿ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments