Select Your Language

Notifications

webdunia
webdunia
webdunia
webdunia

ದೀಪಕ್ ಕೊಲೆಯಲ್ಲಿ ರಮಾನಾಥ್ ರೈ ಕೈವಾಡ– ಬಿಎಸ್‌ವೈ

ಸಿದ್ದರಾಮಯ್ಯ
ಮಂಗಳೂರಿನಲ್ಲಿ ನಡೆದಿರುವ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಅವರ ಕೈವಾಡವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
 
ಬಿಜೆಪಿ ಪರಿವರ್ತನಾ ಯಾತ್ರೆಗೂ ಮುನ್ನು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೀಪಕ್ ಶವವನ್ನು ಮನೆಯವರಿಗೆ ಒಪ್ಪಿಸದೆ ಅವರ ಮನೆಗೆ ಕಾಂಗ್ರೆಸ್‌ನವರು ತಲುಪಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಕೂಡ ಕಾರಣರಾಗಿದ್ದಾರೆ ಎಂದು ಟೀಕಿಸಿದರು.
 
ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಲಾಗುತ್ತಿದೆ. ಇದಕ್ಕೆ ಹೋರಾಟ ರೂಪಿಸಲಾಗುತ್ತದೆ. ಸಿದ್ದರಾಮಯ್ಯನಷ್ಟು ಬೇಜವಾಬ್ದಾರಿ ಮುಖ್ಯಮಂತ್ರಿ ದೇಶದಲ್ಲಿ ಎಲ್ಲೂ ಇಲ್ಲ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯಿಂದ ಹುಳಿ ಹಿಂಡುವ ಕೆಲಸ– ಸಿದ್ದರಾಮಯ್ಯ