Select Your Language

Notifications

webdunia
webdunia
webdunia
webdunia

ಜಾಲತಾಣದಲ್ಲಿ ಅಂಬೇಡ್ಕರ್ ಗೆ ಅವಮಾನ: ರಾಮಸೇನಾ ಕಾರ್ಯಕರ್ತನಿಗೆ ಧರ್ಮದೇಟು

ಸಾಮಾಜಿಕ ಜಾಲ ತಾಣ
ಸಾಮಾಜಿಕ ಜಾಲ ತಾಣದಲ್ಲಿ ಸಂವಿಂಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರಗೆ ಅವಮಾನ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಶ್ರೀ ರಾಮಸೇನಾ ಕಾರ್ಯಕರ್ತನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ನಡೆದಿದೆ.  

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಫೇಸ್ ಬುಕ್ ದಲ್ಲಿ ಬಿ.ಆರ್. ಅಂಬೇಡ್ಕರರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಶ್ರೀ ರಾಮ ಸೇನಾ ಕಾರ್ಯಕರ್ತನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸಂಕೇಶ್ವರ ಪಟ್ಟಣದ ರಮೇಶ ಅಕ್ಕಿವಾಟೆ ಎಂಬ ಯುವಕನಿಂದ ಈ ಕೃತ್ಯ ನಡೆದಿತ್ತು.

ರಮೇಶ ಅಕ್ಕಿವಾಟೆಯನ್ನ ಸಂಕೇಶ್ವರ ಪೊಲೀಸರು ಬಂಧಿಸಿದ್ದಾರೆ. ಪೋಸ್ಟ್ ಶೇರ್ ಮಾಡಿದ ಇಬ್ಬರು ಶ್ರೀ ರಾಮ ಸೇನಾ ಕಾರ್ಯಕರ್ತರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿಯವರನ್ನು ‘ಕಾಗದದ ಹುಲಿ' ಎಂದು ಟೀಕಿಸಲು ಕಾರಣವೇನು?