Publish Date: Fri, 15 Dec 2017 (20:12 IST)
Updated Date: Fri, 15 Dec 2017 (20:14 IST)
ಮುಂಬರುವ ವಿಧಾನಸಭೆ ಚುನಾವಣೆಗೆ ಪ್ರೇಮ್ ಕುಮಾರಿಗೆ ಮೈಸೂರಿನ ಕೆ.ಆರ್. ಕ್ಷೇತ್ರದಿಂದ ಸ್ಪರ್ಧೆ ಮಾಡುವ ವಿಚಾರಕ್ಕೆ ಮಾಜಿ ಸಚಿವ ಎಸ್. ಎ. ರಾಮದಾಸ್ ಪ್ರೀತಿಯಿಂದಲೇ ಹಾರೈಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾಯಿ ಚಾಮುಂಡೇಶ್ವರಿ ಒಳ್ಳೆಯದು ಮಾಡಲಿ ಎಂದು ಪ್ರತಿಕ್ರಿಯಿಸಿದ್ದಾರೆ.
ಪ್ರೇಮ್ಕುಮಾರಿ ತಮ್ಮ ವಿರುದ್ಧ ಸ್ಪರ್ಧಿಸುವುದಾದರೆ ಸ್ಪರ್ಧಿಸಲಿ. ಪ್ರೇಮ್ಕುಮಾರಿ ಈ ರೀತಿ ತೊಂದರೆ ನೀಡುತ್ತಿರುವುದರ ಹಿಂದೆ ಯಾರದ್ದೋ ಕುಮ್ಮಕ್ಕು ಇದೆ. ಇದಕ್ಕೆಲ್ಲಾ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ.
ಮುಂದುವರೆದು ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಚುನಾವಣೆ ಎದುರಿಸಬಹುದು ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.