Publish Date: Thu, 20 Dec 2018 (12:44 IST)
Updated Date: Thu, 20 Dec 2018 (12:47 IST)
ಬೆಳಗಾವಿ : ಬಿಜೆಪಿ ಸದಸ್ಯ ಆಯೋಜಿಸಿದ್ದ ಭೊಜನ ಕೂಟದಲ್ಲಿ ಕಾಂಗ್ರೆಸ್ ಸಚಿವ ರಮೇಶ್ ಜಾರಕಿಹೊಳಿ ಭಾಗಿಯಾಗುವುದರ ಮೂಲಕ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ.
ಮಂಗಳವಾರ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದ್ದ ಶಾಸಕಾಂಗ ಪಕ್ಷದ ಸಭೆಗೆ ರಮೇಶ್ ಜಾರಕಿಹೊಳಿ ಪಾಲ್ಗೊಳ್ಳಲಿಲ್ಲ, ಹಾಗೇ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಗೂ ಬಾರದೇ ದೂರ ಉಳಿದಿದ್ದರು.
ಅಲ್ಲದೇ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಆಯೋಜಿಸಿದ್ದ ಭೊಜನ ಕೂಟದಲ್ಲಿ ಪಾಲ್ಗೊಳ್ಳದ ರಮೇಶ್ ಜಾರಕಿಹೊಳಿ ಬಿಜೆಪಿ ಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ ಆಯೋಜಿಸಿದ್ದ ಭೊಜನ ಕೂಟದಲ್ಲಿ ಪಾಲ್ಗೊಂಡು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಪಕ್ಕದಲ್ಲೇ ಕುಳಿತು ರಾತ್ರಿಯ ಭೋಜನ ಸವಿದು ಇದೀಗ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.