Select Your Language

Notifications

webdunia
webdunia
webdunia
webdunia

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿ ದಿಡೀರ್ ಪ್ರತ್ಯಕ್ಷ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿ ದಿಡೀರ್ ಪ್ರತ್ಯಕ್ಷ
ಬೆಂಗಳೂರು , ಭಾನುವಾರ, 14 ಮಾರ್ಚ್ 2021 (09:11 IST)
ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿಯಲ್ಲಿದ್ದ ಯುವತಿ ನಿನ್ನೆ ದಿಡೀರ್ ಆಗಿ ಸಾಮಾಜಿಕ ಜಾಲತಾಣದ ಮೂಲಕ ಪ್ರತ್ಯಕ್ಷಳಾಗಿದ್ದಾಳೆ.

 

 ಪ್ರಕರಣವನ್ನು ಎಸ್ ಐಟಿ ತನಿಖೆ ನಡೆಸುತ್ತಿದ್ದು, ಕೆಲವರನ್ನು ವಶಕ್ಕೆ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಕಟಿಸಿದ ಯುವತಿ, ನನಗೆ ರಮೇಶ್ ಜಾರಕಿಹೊಳಿ ಕೆಲಸ ಕೊಡಿಸುವುದಾಗಿ ಹೇಳಿ ಮೋಸ ಮಾಡಿದ್ದಾರೆ ಎಂದು ದೂರಿದ್ದಾಳೆ.

‘ಸಿಡಿಯನ್ನು ರಮೇಶ್ ಜಾರಕಿಹೊಳಿಯೇ ಬಿಡುಗಡೆ ಮಾಡಿದ್ದಾರೆ. ನನಗೆ ಅವರಿಂದ ಮೋಸ ಆಗಿದೆ. ಘಟನೆ ಬಹಿರಂಗವಾದ ಬಳಿಕ ನನ್ನ ತಂದೆ-ತಾಯಿ ತೀವ್ರವಾಗಿ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದರು. ನಾನೂ ಎರಡು ಬಾರಿ ಆತ್ಮಹತ್ಯೆಗೆ ಮುಂದಾಗಿದ್ದೆ. ನಮಗೆ ಈಗ ಭದ್ರತೆ ಬೇಕು. ಇದಕ್ಕಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿಗೂ ಮನವಿ ಮಾಡುತ್ತೇನೆ’ ಎಂದು ಯುವತಿ 34 ಸೆಕೆಂಡುಗಳ ವಿಡಿಯೋದಲ್ಲಿ ಅಳಲು ತೋಡಿಕೊಂಡಿದ್ದಾಳೆ.

Share this Story:

Follow Webdunia kannada

ಮುಂದಿನ ಸುದ್ದಿ

ನೀರು ಕುಡಿಯಲು ದೇವಾಲಯಕ್ಕೆ ಹೋದ ಹುಡುಗನಿಗೆ ಥಳಿತ